ಕ್ರೀಡೆ : 2022ರ ಪ್ಯಾರಾ ಶೂಟಿಂಗ್ ವಿಶ್ವಕಪ್ ನಲ್ಲಿ ಭಾರತದ ಮಹಿಳಾ ಶೂಟರ್ ಅವನಿ ಲೇಖರಾ ಭಾರತಕ್ಕೆ ಮೊದಲ ಚಿನ್ನ ತಂದುಕೊಡುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಫ್ರಾನ್ಸ್ನ ಚಟೌರೊಕ್ಸ್ನಲ್ಲಿ ನಡೆದ ಪ್ಯಾರಾ ಶೂಟಿಂಗ್ ವಿಶ್ವಕಪ್ನಲ್ಲಿ ವಿಶ್ವ ದಾಖಲೆಯ ಸ್ಕೋರ್ನೊಂದಿಗೆ ಚಿನ್ನ ಗೆದ್ದಿದ್ದಾರೆ.
ಆರ್ 2 ಮಹಿಳೆಯರ 10 ಮೀ ಏರ್ ರೈಫಲ್ ಎಸ್ ಎಚ್1 ಈವೆಂಟ್ ನಲ್ಲಿ 250.6 ದಾಖಲೆಯ ಸ್ಕೋರ್ ಮಾಡುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಮೋದಿ ಶ್ಲಾಘನೆ :
Advertisement. Scroll to continue reading.

ಅವನಿ ಲೇಖರಾ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ನೀವು ಯಶಸ್ಸಿನ ಹೊಸ ಎತ್ತರಕ್ಕೆ ಏರುತ್ತಿರಲಿ ಮತ್ತು ಇತರರಿಗೆ ಸ್ಫೂರ್ತಿ ನೀಡುತ್ತಿರಲಿ. ನನ್ನ ಶುಭಾಶಯಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.


































