ನವದೆಹಲಿ : ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ಹದಗೆಟ್ಟಿದೆ. ಹೀಗಾಗಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿಯನ್ನು ಸುರ್ಜೇವಾಲಾ ನೀಡಿದ್ದಾರೆ. ‘ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಇಂದು ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಹೆಚ್ಚಿನ ನಿಗಾಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.
Advertisement. Scroll to continue reading.