ವಿಜಯಪುರ : ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿಕೋಟಾ ತಾಲೂಕಿನ ಬಾಬಾನಗರದ ಬಳಿ ನಡೆದಿದೆ.
ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದೆ. ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ವಿಜಯಪುರ ನಿವಾಸಿ ಶಿವಾನಂದ ಬಡಿಗೇರ ಮತ್ತು ತಮಿಳುನಾಡು ಮೂಲಕ ಲಾರಿ ಚಾಲಕ ಬಾಬು ವೆಂಕಟೇಶ್ ಮೃತಪಟ್ಟವರು.
ಬಸ್‌ನಲ್ಲಿದ್ದ 24 ಪ್ರಯಾಣಿಕರಿಗೆ ಗಾಯಗಳಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.