ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಸ್ತುತ ಕೋವಿಡ್ ನಂತರದ ಇತರ ರೋಗ ಲಕ್ಷಣಗಳೊಂದಿಗೆ ಬಳಲುತ್ತಿದ್ದಾರೆ. ಹೀಗಾಗಿ ಅವರು ಜೂ.12 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಉಸಿರಾಟದ ನಾಳದಲ್ಲಿ ಶಿಲೀಂಧ್ರ ಸೋಂಕು ಪತ್ತೆಯಾಗಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ಸೋನಿಯಾ ಗಾಂಧಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದೆ.
ಈ ನಡುವೆ ರಾಹುಲ್ ಗಾಂಧಿಯವರು ತಾಯಿ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಇಂದು ನಡೆಯಬೇಕಿದ್ದ ಇಡಿ ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಹೀಗಾಗಿ ಇಡಿ ಜೂ.20ಕ್ಕೆ ವಿಚಾರಣೆ ಮುಂದೂಡಿದೆ.
Advertisement. Scroll to continue reading.

In this article:black fungus, Diksoochi news, diksoochi Tv, diksoochi udupi, Soniya Gandhi

Click to comment