Connect with us

Hi, what are you looking for?

Diksoochi News

ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರದೇ ಮೇಲುಗೈ

2

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶವನ್ನು ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದ್ದಾರೆ. ಈ ಬಾರಿ ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 5,99,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 14,403 ಪುನರಾವರ್ತಿತ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದಿದ್ದು, ನಿರೀಕ್ಷೆಗಿಂತ ಹೆಚ್ಚಿನ ಫಲಿತಾಂಶ ಬಂದಿದೆ. ಈ ಭಾರಿಯೂ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 81 ಕೇಂದ್ರಗಳಲ್ಲಿ ಮೌಲ್ಯ ಮಾಪನ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

ವಿಜ್ಞಾನದ ವಿದ್ಯಾರ್ಥಿಗಳು ಹೆಚ್ಚು ತೇರ್ಗಡೆಗೊಂಡಿದ್ದಾರೆ. ಕಲಾ ವಿಭಾಗದಲ್ಲಿ 58.17 ಶೇ., ವಾಣಿಜ್ಯ 64.97% , ವಿಜ್ಞಾನ ವಿಭಾಗದಲ್ಲಿ 73.25% ಫಲಿತಾಂಶ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Advertisement. Scroll to continue reading.

ದಕ್ಷಣಕನ್ನಡ ಜಿಲ್ಲೆಗೆ ಮೊದಲ ಸ್ಥಾನ ಪಡೆದುಕೊಂಡಿದ್ದು, ಉಡುಪಿ 2ನೇ ಸ್ಥಾನ, ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಣ 4ನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ, ಚಿತ್ರದುರ್ಗ ಕೊನೆಯ ಸ್ಥಾನ ಪಡೆದುಕೊಂಡಿದೆ ಎಂದು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!