ವರದಿ : ಬಿ.ಎಸ್.ಆಚಾರ್ಯ
ಮಣಿಪಾಲ : ನಿಂದಾಗಿ ಕುಟುಂಬದ ಆಧಾರ ಸ್ತಂಭದಂತಿದ್ದ ಸದಸ್ಯರನ್ನು ಕಳೆದುಕೊಂಡು ಜೀವನೋಪಾಯದ ದಿಕ್ಕು ತೋಚದೇ ಸಂಕಷ್ಟದಲ್ಲಿದ್ದ ಕುಟುಂಬಗಳ ಮಹಿಳೆಯರಿಗೆ ಇಂದು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳುವ ಕುರಿತು ಮಾಹಿತಿ ಕಾರ್ಯಾಗಾರವನ್ನು ರಜತಾದ್ರಿ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ವ ಉದ್ಯೋಗ ಪ್ರಾರಂಭಿಸಲು ಆತ್ಮ ವಿಶ್ವಾಸ, ಕಠಿಣ ಪರಿಶ್ರಮ, ಧನಾತ್ಮಕ ಚಿಂತನೆ ಹಾಗೂ ಶೃದ್ಧೆ ಬಹಳ ಮುಖ್ಯ. ತಾವು ಆಸಕ್ತಿಯಿಂದ ಮುಂದೆ ಬಂದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿಯಲ್ಲಿ ಸ್ವ ಸಹಾಯ ಗುಂಪುಗಳ ಮುಖಾಂತರ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನರೇಗಾ, ಸಂಜೀವಿನಿ ಹಾಗೂ ವಿವಿಧ ಉಚಿತ ಸ್ವ ಉದ್ಯೋಗ ಕೌಶಲ್ಯ ತರಬೇತಿಗಳ ಕುರಿತು ಮಾಹಿತಿ ನೀಡಲಾಯಿತು.


ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರಾದ ಬಾಬು ಎಂ, ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವಾ,
NRLM ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಆಚಾರ್, ನಮ್ಮ ಭೂಮಿ ಸಂಸ್ಥೆಯಿಂದ ಶ್ರೀನಿವಾಸ್ ಗಾಣಿಗ, ಕೃಪಾ, NRLM ಜಿಲ್ಲಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದು, ಅಗತ್ಯ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಶಣಾಧಿಕಾರಿ ಕುಮಾರ್ ನಾಯ್ಕ್ ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಕುಟುಂಬಗಳಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

NRLM ಜಿಲ್ಲಾ ವ್ಯವಸ್ಥಾಪಕಿ ನವ್ಯಾ ಕಾರ್ಯಕ್ರಮ ನಿರೂಪಿಸಿದರು. ಅವಿನಾಶ್ ವಂದಿಸಿದರು.


































