Connect with us

Hi, what are you looking for?

Diksoochi News

ರಾಜ್ಯ

ಶಿವಮೊಗ್ಗ : 634 ಕಾಲು ಸಂಕಗಳನ್ನು ನಿರ್ಮಾಣ ಮಾಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್ ಸ್ಥಾಯಿ ಸಮಿತಿ ಸಭೆಯಲ್ಲಿ ಚರ್ಚಿಸಿದ ಸಂಸದ ರಾಘವೇಂದ್ರ

2

ವರದಿ : ದಿನೇಶ್ ರಾಯಪ್ಪನಮಠ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರವು ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿ ಮತ್ತು ಮಲೆನಾಡು ಪ್ರದೇಶವನ್ನು ಒಳಗೊಂಡಿರುವ ವಿಶಿಷ್ಟವಾದ ಭೂಸ್ವರೂಪವನ್ನು ಹೊಂದಿರುವ ಶಿವಮೊಗ್ಗ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲೆನಾಡು ಪ್ರದೇಶಗಳಲ್ಲಿ ಅಂದಾಜು 4954 ಕುಗ್ರಾಮಗಳಿದ್ದು, ಮಾನವ ವಾಸವು ಚದುರಿದ ಮತ್ತು ಗುಡ್ಡಗಾಡು ಪರ್ವತಗಳಲ್ಲಿ ವಾಸಿಸುವ ಹಾಗೂ ಮಳೆಗಾಲದಲ್ಲಿ ತುಂಬಿ ಹರಿಯುವ ಸಣ್ಣ ತೊರೆಗಳನ್ನು ಶಾಲಾ ಮಕ್ಕಳು ಸ್ಥಳೀಯ ಕಾಲು ಸೇತುವೆಗಳ ಮೇಲೆ ದಾಟುವುದು ಕಷ್ಟಕರ ಮತ್ತು ಸವಾಲಿನದ್ದಾಗಿದೆ.

ಅಸಮರ್ಪಕ ರಸ್ತೆ ಸಂಪರ್ಕದಿಂದ ಜನ ಮತ್ತು ಜಾನುವಾರುಗಳು ಪ್ರಾಣ ಕಳೆದುಕೊಂಡ ನಿದರ್ಶನಗಳಿವೆ. ಅಲ್ಲದೇ ಜನರು ತಮ್ಮ ಸ್ಥಳಗಳಿಗೆ ತಲುಪಲು ದೂರದ ಪ್ರಯಾಣವನ್ನು ತಡೆಯಲು ಒಟ್ಟು 634 ಕಾಲು ಸಂಕಗಳನ್ನು ನಿರ್ಮಾಣ ಮಾಡುವ ಬಗ್ಗೆ ಲೋಕಸಭಾ ಸದಸ್ಯ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯ ಬಿ.ವೈ.ರಾಘವೇಂದ್ರರವರು ಗ್ರಾಮೀಣಾಭಿವೃದ್ಧಿ & ಪಂಚಾಯತ್‌ ರಾಜ್ ಸ್ಥಾಯಿ ಸಮಿತಿ ಸಭೆಯಲ್ಲಿ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಜಾದವ್, ಸಮಿತಿ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಿದರು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಕಾಂಪೌಂಡ್ ನಿರ್ಮಾಣದ ಬಗ್ಗೆಯೂ ಸಹ ಚರ್ಚಿಸಲಾಗಿದೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆಯನ್ನು ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!