Connect with us

Hi, what are you looking for?

Diksoochi News

ರಾಷ್ಟ್ರೀಯ

ರಾಷ್ಟ್ರಪತಿ ಚುನಾವಣೆ : ಪ್ರಧಾನಿ ಮೋದಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

1

ನವದೆಹಲಿ : ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ ಅಧ್ಯಕ್ಷೀಯ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಒಡಿಶಾದ ಸಂತಾಲ್ ಬುಡಕಟ್ಟಿಗೆ ಸೇರಿದ ದ್ರೌಪದಿ ಮುರ್ಮು ಅವರು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ನವೀನ್ ಪಟ್ನಾಯಕ್ ಅವರ ಬಿಜು ಜನತಾದಳ ಮತ್ತು ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ನಂತಹ ಪಕ್ಷಗಳು ಜಾರ್ಖಂಡ್ ನ ಮಾಜಿ ರಾಜ್ಯಪಾಲೆ ದ್ರೌಪದಿ ಅವರನ್ನು ಬೆಂಬಲಿಸುತ್ತಿದ್ದಾರೆ. ಹೀಗಾಗಿ ಎನ್ ಡಿ ಎ ಅಭ್ಯರ್ಥಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ.

Advertisement. Scroll to continue reading.

ಒಟ್ಟು 10,86,431 ಮತಗಳ ಪೈಕಿ ಎನ್‌ಡಿಎ 5,32,351 ಮತಗಳನ್ನು ಹೊಂದಿದೆ. ಬಿಜು ಜನತಾದಳ 31,686, ವೈಎಸ್‌ಆರ್ ಕಾಂಗ್ರೆಸ್ 45,550 ಮತ್ತು ಎಐಎಡಿಎಂಕೆ 14,940 ಮತಗಳನ್ನು ಹೊಂದಿವೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!