ಚಿತ್ರದುರ್ಗ : ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರೆ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ಪಟ್ಟಣದ ಬಳ್ಳಾರಿ ರಸ್ತೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಇರ್ಫಾನಾ(47) ಸಾವನ್ನಪ್ಪಿದವರು. ಬೈಕ್ ಸವಾರ 55 ವರ್ಷದ ಪತಿ ಅಲಿ ಸ್ಥಿತಿ ಗಂಭೀರವಾಗಿದೆ.
ಗಾಯಾಳುವನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.