ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ನ ಡಿಜಿಟಲ್ ಅಂಗವಾದ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ ಮುಖೇಶ್ ಅಂಬಾನಿ ಈ ಘಟಕದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದೆ.
ಕಾರ್ಯನಿರ್ವಾಹಕೇತರ ನಿರ್ದೇಶಕ ಮತ್ತು ಮುಖೇಶ್ ಅವರ ಪುತ್ರ ಆಕಾಶ್ ಅಂಬಾನಿ ಅವರನ್ನು ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ ತಿಳಿಸಿದೆ.
ಜೊತೆಗೆ ಕೆವಿ ಚೌಧರಿ ಮತ್ತು ರಮೀಂದರ್ ಸಿಂಗ್ ಗುಜ್ರಾಲ್ ಅವರನ್ನು ಸ್ವತಂತ್ರ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಜೂನ್ 27ರಿಂದ ಜಾರಿಗೆ ಬರುವಂತೆ ರಿಲಯನ್ಸ್ ಜಿಯೋ ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಜೂನ್ 27, 2022 ರಂದು ಸೋಮವಾರ ನಡೆದ ರಿಲಯನ್ಸ್ ಜಿಯೋದ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಪ್ರಕಾರ ಪಂಕಜ್ ಮೋಹನ್ ಪವಾರ್ ಅವರು ಜೂನ್ 27 ರಿಂದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇನ್ನು ಮುಖೇಶ್ ಅಂಬಾನಿ ಅವರ ಪುತ್ರ ಆಕಾಶ್ ಅಂಬಾನಿ ರಿಲಯನ್ಸ್ ಜಿಯೋ ಸಂಸ್ಥೆಯ ಚೇರ್ಮನ್ ಆಗಿ ನೇಮಕಗೊಂಡಿದ್ದಾರೆ.
ಮುಖೇಶ್ ಅಂಬಾನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ರಿಲಯನ್ಸ್ ಜಿಯೋ ಇನ್ಫೋಕಾಮ್ ಸೇರಿದಂತೆ ಎಲ್ಲಾ ಜಿಯೋ ಡಿಜಿಟಲ್ ಸೇವೆಗಳ ಬ್ರಾಂಡ್‌ಗಳ ಮೂಲ ಸಂಸ್ಥೆಯಾದ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿದ್ದಾರೆ.

