ಉದಯಪುರ: ಪ್ರವಾದಿ ಮಹಮ್ಮದ್‌ರ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ಶಿರಚ್ಚೇದ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ ಹಾಕಿದ ಘಟನೆ ರಾಜಸ್ಥಾನದ ಉದಯಪುರದಲ್ಲಿ ಇಂದು ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ಗೌಸ್ ಮೊಹಮ್ಮದ್ ಮತ್ತು ಮೊಹಮ್ಮದ್ ರಿಯಾಜ್ ಎಂದು ಗುರುತಿಸಲಾಗಿದೆ. ಉದಯಪುರ ನಗರದ ಮಾಲ್ದಾಸ್ ಬೀದಿಯಲ್ಲಿ ದರ್ಜಿ ಅಂಗಡಿ ನಡೆಸುತ್ತಿದ್ದ ಕನ್ಹಯ್ಯಾ ಲಾಲ್ ಸಾಹು ಕೊಲೆಯಾದ ವ್ಯಕ್ತಿ.
ಈ ಘಟನೆಯ ಬಳಿಕ ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ.
Advertisement. Scroll to continue reading.

https://twitter.com/ANI_MP_CG_RJ/status/1541811308617945088?t=ijSrdmZuhECWdyju7YlBCQ&s=19


































