ನವದೆಹಲಿ : ಉದಯಪುರದಲ್ಲಿ ಟೈಲರ್ ಹತ್ಯೆಯಾದ ಬಳಿಕ ರಾಜಸ್ಥಾನದಲ್ಲಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ದೊಡ್ಡ ಸಭೆಗಳನ್ನು ನಡೆಸದಂತೆ ಒಂದು ತಿಂಗಳ ಕಾಲ ನಿಷೇಧ ಹೇರಲಾಗಿದೆ.
ಸರ್ಕಾರವು ಉದಯಪುರ ಮತ್ತು ಸುತ್ತಮುತ್ತ 600 ಹೆಚ್ಚುವರಿ ಪಡೆಗಳನ್ನು ಸ್ಥಳಾಂತರಿಸಿದ್ದು, ನಗರದ ಕೆಲವು ಭಾಗಗಳಲ್ಲಿ ಕರ್ಫ್ಯೂ ಘೋಷಿಸಲಾಗಿದೆ.
ನಿನ್ನೆ ಟೈಲರ್ ಕನ್ಹಯ್ಯಾ ಲಾಲ್ ಎಂಬುವವರ ಅಂಗಡಿಗೆ ಬಂದ ಇಬ್ಬರು ವ್ಯಕ್ತಿಗಳು, ಕನ್ಹಯ್ಯಾ ಲಾಲ್ ಅವರನ್ನು ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದಿದ್ದರು. ಅಷ್ಟೇ ಅಲ್ಲದೆ ಹತ್ಯೆಯ ವಿಡಿಯೋವನ್ನು ಲೈವ್ ಬಿಟ್ಟಿದ್ದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ್ದಾರೆ.
Advertisement. Scroll to continue reading.

ಈ ಘಟನೆಯ ಬಳಿಕ ಉದಯಪುರ ಸೇರಿದಂತೆ ರಾಜ್ಯಾದ್ಯಂತ ಉದ್ವಿಗ್ನತೆ ಹೆಚ್ಚಿಸಿದೆ.


































