ಸಿನೆಮಾ : ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿಧನರಾಗಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ವಿಧಿವಶರಾಗಿದ್ದಾರೆ. ಇತ್ತೀಚಿನ ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಕನ್ನಡ ಸೇರಿದಂತೆ ವಿವಿಧ ಭಾಷಾ ಚಿತ್ರಗಳಲ್ಲಿ ನಟಿಸಿರುವ ಮೀನಾ, 2009ರಲ್ಲಿ ಬೆಂಗಳೂರಿನ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದರು. ಅವರಿಗೆ 11 ವರ್ಷದ ನೈನಿಕಾ ಎಂಬ ಮಗಳಿದ್ದಾಳೆ. ವಿದ್ಯಾಸಾಗರ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ವಿವಾಹದ ಬಳಿಕ ವಿದ್ಯಾ ಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು ಎಂದು ತಿಳಿದು ಬಂದಿದೆ.
ವಿದ್ಯಾಸಾಗರ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ನಡೆಯಲಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.
