ಬೆಂಗಳೂರು : ರಾಜ್ಯದ ಹಲವೆಡೆ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಇದರೊಂದಿಗೆ ರಾಜ್ಯಾದ್ಯಂತ ನಾಳೆಯಿಂದ ನಾಲ್ಕು ದಿನಗಳ ಕಾಲ ಹೆಚ್ಚಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಜುಲೈ 2 ರಿಂದ 4ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸದ್ಯ ಕರಾವಳಿ ಸೇರಿದಂತೆ ಮಡಿಕೇರಿಯ ಸೋಮವಾರಪೇಟೆ, ಜೋಡುಪಾಲ, ಮದೆನಾಡು, ಸಂಪಾಜೆ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Advertisement. Scroll to continue reading.
