ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ನಿನ್ನೆ ರಾಜ್ಯಪಾಲರ ಸೂಚನೆಯಂತೆ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಸಿಎಂ ಆಗಿದ್ದಂತ ಉದ್ಧವ್ ಠಾಕ್ರೆಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದರು.
ಈ ನಡುವೆ ಸಂಜೆ 7.30ಕ್ಕೆ ಮಹಾರಾಷ್ಟ್ರದ ರಾಜಭವನದಲ್ಲಿ ಸರಳ ಸಮಾರಂಭದಲ್ಲಿ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಲ್ಲದೇ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ಏರಿದ್ದಾರೆ.
Advertisement. Scroll to continue reading.

ತಾನು ಸರ್ಕಾರದ ಭಾಗವಾಗುವುದಿಲ್ಲ ಎಂದು ಘೋಷಿಸಿದ್ದ ಫಡ್ನವಿಸ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
In this article:Devendra fadnavis, Diksoochi news, diksoochi Tv, diksoochi udupi, Eknath Shinde

Click to comment