ಕುಂದಾಪುರ : ಪೂರಕ ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ.
ಮಾನಸ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ ಯು ಸಿ ಕಲಿಯುತ್ತಿದ್ದು ಎಪ್ರಿಲ್ ತಿಂಗಳ ಪಿಯು ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಳು ಎನ್ನಲಾಗಿದೆ. ಮನೆಯಲ್ಲಿಯೇ ಇದ್ದು ಜೂನ್ ತಿಂಗಳ ಸಪ್ಲಿಮೆಂಟರಿ ಪರೀಕ್ಷೆಗೆ ಕಟ್ಟಿದ್ದಳು.
ಶುಕ್ರವಾರ ಪ್ರಥಮ ಪಿಯುಸಿಯ ಫಲಿತಾಂಶವಾಗಿದ್ದರಿಂದ ತಾನು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಬಹುದು ಎಂದು ಹೆದರಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಮನೆಯ ಎದುರು ಇರುವ ಹುಲ್ಲು ಹಾಕುವ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾಳೆ.
Advertisement. Scroll to continue reading.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.