ಬೆಂಗಳೂರು : ಮೂರೂವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ ಆರ್ ನಗರದಲ್ಲಿ ಬೆಳಕಿಗೆ ಬಂದಿದೆ.
ಮಗು ರಿಯಾ ಮೃತ ಮಗು. ತಾಯಿ ದೀಪಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ.
ʻನನ್ನ ಸಾವಿಗೆ ಯಾರೂ ಕಾರಣರಲ್ಲʼ , ʻಸಾರಿ ಅಮ್ಮʼ ಎಂದು ಡೆತ್ ನೋಟ್ ಬರೆದಿಟ್ಟು ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ದೀಪಾ ಅವರು ಆರ್ ಆರ್ ನಗರದ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಜ್ವರ ಮತ್ತು ಹೊಟ್ಟೆ ನೋವು ಹಿನ್ನೆಲೆ ಚಿಕಿತ್ಸೆ ಕೂಡಾ ಪಡೆಯುತ್ತಿದ್ದರು. ಡೆತ್ ನೋಟ್ ನಲ್ಲಿ ‘ Nobody is responsible for it i just felt life is full of shits i am sorry mom and divya Love you shona ಎಂದು ದೀಪಾ ಬರೆದಿದ್ದಾರೆ ಎನ್ನಲಾಗಿದೆ.
ದೀಪಾ ಅವರು ಬ್ರಹ್ಮಾವರ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಕುಟುಂಬದ ಜೊತೆ ವಾಸವಾಗಿದ್ದರು. ದೀಪಾ ಅವರ ಪತಿ ಆದರ್ಶ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ.
2017ರಲ್ಲಿ ದೀಪಾ ಮತ್ತು ಆದರ್ಶ್ ಅವರ ಮದುವೆ ಆಗಿತ್ತು. ಮದ್ವೆಯಾದಗಿನಿಂದಲೂ ಆರ್ ಆರ್ ನಗರದ ಮಂತ್ರಿ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಕಳೆದೊಂದು ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು.
ಚಿಕಿತ್ಸೆ ಪಡೆದರೂ ನೋವು ಕಡಿಮೆ ಆಗಿರಲಿಲ್ಲ. ಹೀಗಾಗಿ ದೀಪಾ ಜಿಗುಪ್ಸೆಗೊಂಡಿದ್ದರು ಎಂದು ತಿಳಿದು ಬಂದಿದೆ. ರಾತ್ರಿ ಮಲಗಿದ್ದ ವೇಳೆ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ನೇಣು ಹಾಕಿ ಕೊಲೆ ಮಾಡಿದ್ದಾರೆ. ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆರ್ ಆರ್ ನಗರ ಠಾಣಾ ಪೊಲೀಸ್ರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

































