ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ರಾಜ್ಯದ ಹಲವೆಡೆ ಮಳೆಯು ಜೋರಾಗಿದೆ. ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ಮುಂದಿನ ಮುಂದಿನ 3 ದಿನ ಕರಾವಳಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಜುಲೈ 5 ರ ವರೆಗೆ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಜೊತೆಗೆ ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮಲೆನಾಡು ಭಾಗಗಳಲ್ಲಿಯೂ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದಲ್ಲಿಯೂ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
Advertisement. Scroll to continue reading.