ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಕಳೆದ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲದೇ ಅಲ್ಲಲ್ಲಿ ಸೇತುವೆಯ ಮೇಲೆ ನೀರು ಹರಿದ ಪರಿಣಾಮ, ಕೆಲ ಗ್ರಾಮಗಳಿಗೆ ರಸ್ತೆ ಸಂಪರ್ಕ ಕೂಡ ಕಡಿತಗೊಂಡಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ತಹಶೀಲ್ದಾರ್, ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
Advertisement. Scroll to continue reading.