ಉಡುಪಿ : ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಉಡುಪಿ ಜಿಲ್ಕೆಯಾದ್ಯಂತ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶಿಸಿದ್ದಾರೆ.