ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ಬಂಧನಕ್ಕೊಳಗಾಗಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.
ಹಾಗೆಯೇ ಬೆಂಗಳೂರು ನಗರದ ಮಾಜಿ ಡಿಸಿಯಾಗಿದ್ದ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಲಂಚ ಪ್ರಕರಣದಲ್ಲಿ ಬಂಧಿಸಿದ ನಂತರ ಕರ್ನಾಟಕ ಸರ್ಕಾರ ಅವರನ್ನೂ ಅಮಾನತು ಮಾಡಿ ಆದೇಶಿಸಿದೆ.
ಭೂ ವಿವಾದವನ್ನು ಬಗೆಹರಿಸಲು ಮಂಜುನಾಥ್ ತನ್ನ ಸಿಬ್ಬಂದಿಯ ಮೂಲಕ ಲಂಚ ಪಡೆದ ಆರೋಪವನ್ನು ಎದುರಿಸುತ್ತಿದ್ದ ಮಂಜುನಾಥ್ ಬೆಂಗಳೂರು ನಗರ ಜಿಲ್ಲಾ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆಗೊಂಡಿದ್ದರು. ಅದಾದ ನಾಲ್ಕು ದಿನಗಳ ನಂತರ ಮಂಜುನಾಥ್ ಅವರನ್ನು ಎಸಿಬಿ ಬಂಧಿಸಿತ್ತು.
Advertisement. Scroll to continue reading.

In this article:Amruth Paul, Diksoochi news, diksoochi Tv, diksoochi udupi, J.Manjunath
Click to comment

































