ಉತ್ತರಾಖಂಡ : ಕಾರೊಂದು ನದಿಗೆ ಬಿದ್ದು ಒಂಭತ್ತು ಮಂದಿ ಸಾವನ್ನಪ್ಪಿರುವ ಘಟನೆ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರೆಲ್ಲ ಪಂಜಾಬ್ ಮೂಲದವರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಒಟ್ಟು 10 ಜನರಿದ್ದರು. ಅದರಲ್ಲಿದ್ದ ಒಂದು ಹೆಣ್ಣು ಮಗುವನ್ನು ರಕ್ಷಿಸಲಾಗಿದೆ.
ಘಟನಾ ಸ್ಥಳಕ್ಕೆ ಉತ್ತರಾಖಂಡ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ.
Advertisement. Scroll to continue reading.