ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪವಿತ್ರ ಗುಹಾಂತರ ದೇವಾಲಯ ಅಮರನಾಥದ ಬಳಿ ಶುಕ್ರವಾರ ಮೇಘಸ್ಫೋಟದಿಂದ 15 ಜನರು ಸಾವನ್ನಪ್ಪಿದ್ದಾರೆ. 40 ಜನರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶುಕ್ರವಾರ ಮೇಘಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಇದುವರೆಗೆ ಮೂವರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಅಧಿಕಾರಿಗಳ ಪ್ರಕಾರ, 5.30 ರ ಸುಮಾರಿಗೆ ಕೆಳಗಿನ ಪವಿತ್ರ ಗುಹೆಯಲ್ಲಿ ಮೇಘಸ್ಫೋಟ ಸಂಭವಿಸಿದೆ. ಮೇಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾದ ನಂತರ ಗುಹೆಯ ಮೇಲಿನಿಂದ ಮತ್ತು ಬದಿಗಳಿಂದ ನೀರು ಹರದಿದೆ ಎಂದು ಐಟಿಬಿಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement. Scroll to continue reading.