ಬೆಂಗಳೂರು : ಜಮ್ಮುಕಾಶ್ಮೀರದ ಅಮರನಾಥ ಗುಹೆ ಬಳಿ ಮೇಘ ಸ್ಪೋಟ ಸಂಭವಿಸಿದೆ. ರಾಜ್ಯದ ನೂರಕ್ಕೂ ಹೆಚ್ಚು ಜನರು ಯಾತ್ರೆಗೆ ತೆರಳಿದ್ದು, ಅವರೆಲ್ಲರೂ ಬಹುತೇಕ ಸುರಕ್ಷಿತವಾಗಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈಗಾಗಲೇ ಹೆಲ್ಪ್ ಲೈನ್ ಆರಂಭಿಸಲಾಗಿದೆ. ಹೆಲ್ಪ್ಲೈನ್ ಗೆ 15-20 ಜನ ಈಗಾಗಲೇ ಕರೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮಾಡ್ತಿದ್ದೇವೆ. ಬಿಎಸ್ಎಫ್ ಸಿಬ್ಬಂದಿ ಸ್ಥಳದಲ್ಲಿದ್ದಾರೆ. 080-1070, 22340676 ಸಂಖ್ಯೆಗೆ ಕರೆ ಮಾಡಬಹುದು. ಸರ್ಕಾರದ ಮುಖ್ಯ ಕಾರ್ಯದರ್ಶಿ ಕೇಂದ್ರದ ಜೊತೆಗೆ ಸಂಪರ್ಕ ಹೊಂದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇನ್ನೂ 2-3 ದಿನ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಅದಕ್ಕೆ ಅನುಗುಣವಾಗಿ ಕಾರ್ಯಾಚರಣೆ ಮಾಡಲಾಗುತ್ತದೆ. ಈಗಾಗಲೇ ನಿನ್ನೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದೇನೆ. ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

