ಬೈಂದೂರು : ಮತ್ಸ್ಯ ಬಂಧನ ಪ್ರೈವೆಟ್ ಲಿಮಿಟೆಡ್ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಶಿಲಾನ್ಯಾಸ ಸಮಾರಂಭ ಜನವರಿ 19 ರಂದು ಮಧ್ಯಾಹ್ನ 2 ಗಂಟೆಗೆ ಎಲ್ಲೂರಿನಲ್ಲಿ ನಡೆಯಲಿದೆ. ಘಟಕದ ಶಿಲನ್ಯಾಸವನ್ನು ಮುಜರಾಯಿ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಮಾಡಲಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಎಸ್. ಅಂಗಾರ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ, ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರೀ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಎಂ.ಡಿ ಎಂ.ಎಲ್. ದೊಡ್ಮನಿ, ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ, ಬೈಂದೂರು ಜಿಲ್ಲಾ ಪಂಚಾಯತ್ ಸದಸ್ಯ ಶಂಕರ್ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯ ಗೌರಿ ದೇವಾಡಿಗ, ದ.ಕ – ಉಡುಪಿ ಜಿಲ್ಲಾ ಸಹಕಾರ ಮೀನು ಮಾರಾಟ ಫೆಡರೇಷನ್‍ನ ಅಧ್ಯಕ್ಷ ಯಶ್‍ಪಾಲ್ ಎ. ಸುವರ್ಣ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಕಲ್ತೋಡು ತಾಲೂಕು ಪಂಚಾಯತ್ ಸದಸ್ಯ ವಿಜಯ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲ ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ರಾಜ್ಯ ಯೋಜನಾ ಆಯೋಗದ ಅಧಿಕಾರೇತರ ಸದಸ್ಯೆ ಪ್ರಿಯದರ್ಶಿನಿ ಬೆಸ್ಕೂರು, ಜ್ಯೋತಿಷಿ ರಘುನಾಥ ಜೋಯಿಸ್, ಬೈಂದೂರು ಉದ್ಯಮಿ ಕೆ.ವೆಂಕಟೇಶ್ ಕಿಣಿ, ಗೋಳಿಹೊಳೆ ಗ್ರಾಮ ಪಂಚಾಯತ್ ನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ ಶಾನುಭಾಗ್, ಮೈಸೂರಿನ ಉದ್ಯಮಿ ಗುರುರಾಜ ಪಂಜು ಪೂಜಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತ.
