ನವದೆಹಲಿ : ಕರ್ನಾಟಕ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತಹ ಮೇಲ್ಮನವಿ ಅರ್ಜಿಗಳ ವಿಚಾರಣೆ ಮಾಡಲು ಸುಪ್ರೀಂಕೋರ್ಟ್ ಸಮ್ಮತಿಸಿದ್ದು, ಮುಂದಿನವಾರ ವಿಚಾರ ಆರಂಭಿಸಲಿದೆ.
ವಕೀಲ ಪ್ರಶಾಂತ್ ಭೂಷಣ್ ಅವರು ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಗಳನ್ನು ಸಿಜೆಐ ಮುಂದೆ ಪ್ರಸ್ತಾಪಿಸಿದರು. ಕರ್ನಾಟಕದಲ್ಲಿ ಮುಂದಿನ ವಾರ ಹಿಜಾಬ್ ವಿವಾದದಲ್ಲಿರುವ ಅರ್ಜಿಗಳನ್ನು ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಮುಂದಿನ ವಾರದಿಂದ ಹಿಜಾಬ್ ಗೆ ಸಂಬಂಧಿಸಿದಂತೆ ಅರ್ಜಿಗಳನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಕೀಲ ಪ್ರಶಾಂತ್ ಭೂಷಣ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸಿಜೆ ಪೀಠದಲ್ಲಿ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.
Advertisement. Scroll to continue reading.



































