ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ
Published
0
ಉಡುಪಿ : ಉಡುಪಿ ಜಿಲ್ಲೆಯಲ್ಲೂ ಇಂದು ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು. ನಾಲ್ಕನೇ ದರ್ಜೆಯ ಸಿಬ್ಬಂದಿಗಳಿಗೆ ಪ್ರಥಮ ಲಸಿಕೆ ನೀಡುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಜಿ. ಜಗದೀಶ್, ಶಾಸಕ ರಘುಪತಿ ಭಟ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಚೂಡ ಮೊದಲಾದವರು ಉಪೊಸ್ಥಿತರಿದ್ದರು. 12,000 ಡೋಸ್ ಲಸಿಕೆ ಉಡುಪಿ ಜಿಲ್ಲೆಗೆ ಬಂದಿದ್ದು, ಇಂದು 6 ಕೇಂದ್ರಗಳಲ್ಲಿ ತಲಾ ನೂರರಂತೆ 600 ಕೋವಿಡ್ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಡಾ.ಟಿ.ಎಂ.ಎ.ಪೈ ಆಸ್ಪತ್ರೆ, ಕುಂದಾಪುರದ ಮತ್ತು ಕಾರ್ಕಳದ ತಾಲೂಕು ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದೆ.