Connect with us

Hi, what are you looking for?

Diksoochi News

ರಾಷ್ಟ್ರೀಯ

ಉಪರಾಷ್ಟ್ರಪತಿ ಚುನಾವಣೆ : ಬಿಜೆಪಿ ಅಭ್ಯರ್ಥಿ ಘೋಷಣೆ

3

ನವದೆಹಲಿ : ಉಪರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಜಗದೀಪ್ ಧಂಕರ್ ಹೆಸರು ಘೋಷಿಸಿದೆ.

ಶನಿವಾರ ಸಂಜೆ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಉಪರಾಷ್ಟ್ರಪತಿ ಅಭ್ಯರ್ಥಿಯ ಹೆಸರನ್ನು ಚರ್ಚಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜಗದೀಪ್ ಧಂಕರ್ ಅವರ ಹೆಸರನ್ನು ಘೋಷಿಸಿದರು. ಮಧ್ಯಾಹ್ನ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಇದಕ್ಕೂ ಮೊದಲು, ಧಂಕರ್ ಶುಕ್ರವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

Advertisement. Scroll to continue reading.

ಅಂದ್ಹಾಗೆ, ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 6, 2022 ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶವೂ ಹೊರಬೀಳಲಿದೆ. ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 11ರಂದು ಕೊನೆಗೊಳ್ಳಲಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!