ಶಿವಮೊಗ್ಗ : ನೇಣು ಬಿಗಿದುಕೊಂಡು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೊರಬದಲ್ಲಿ ನಡೆದಿದೆ.
ಕಪ್ಪಗಳೆ ಗ್ರಾಮದ ನಯನ (27) ಹಾಗು ಮಗ ಗುರು (4) ಆತ್ಮಹತ್ಯೆ ಮಾಡಿಕೊಂಡವರು. ನಯನ ಹಾಗೂ ಶರತ್ 5 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ. ಆದರೆ, ಇಂದು ಮನೆಯಲ್ಲಿ ನಯನ ತನ್ನ ನಾಲ್ಕು ವರ್ಷದ ಮಗುವಿಗೆ ನೇಣು ಹಾಕಿ ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳ ಎಂಬ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ನಯನಾ ಮನೆಯವರು ಪತಿ ಶರತ್ ಕುಟುಂಬದವರ ವಿರುದ್ಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
Advertisement. Scroll to continue reading.