ಉಡುಪಿ : ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ, ಬಂಟರ ಯಾನೆ ನಾಡವರ ಮಾತೃ ಸಂಘ, ತಾಲೂಕು ಸಮಿತಿ, ಬಂಟರ ಸಂಘ ಉಡುಪಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ಸೈಂಟ್ ಸಿಸಿಲಿ ಪಿಯು ಕಾಲೇಜಿನ ಕನ್ನಡ ಉಪನ್ಯಾಸಕಿ ವಾಸಂತಿ ಅಂಬಲಪಾಡಿ ಉದ್ಘಾಟಿಸಿದರು.
ಉಡುಪಿ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಗಣೇಶ್ ಅಮೀನ್ ಸಂಕಮಾರ್, ಉಡುಪಿ ತಾಲೂಕು ಬಂಟರ ಸಂಘದ ಸಂಚಾಲಕ ಬಿ.ಜಯರಾಜ್ ಹೆಗ್ಡೆ, ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್, ಉಡುಪಿ ಸಾಪಲ್ಯ ಟ್ರಸ್ಟ್ ಪ್ರವರ್ತಕ ನಿರುಪಮ ಪ್ರಸಾದ್ ಶೆಟ್ಟಿ, ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಯಶೋಧಾ ಜೆ.ಶೆಟ್ಟಿ ಉಪಸ್ಥಿತರಿದ್ದರು.

ಈ ವೇಳೆ ಆಟೋಟ ವಿಜೇತರಿಗೆ ಬಹುಮಾನ ವಿತರಣೆ, ನಳಪಾಕ ಮಾಡಿತಂದ ಮಹಿಳೆಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಆಟಿ ಮಾಸದ ಖಾದ್ಯಗಳನ್ನು ಉಣಬಡಿಸಲಾಯಿತು.

































