ವಿಜಯನಗರ : ಹುಚ್ಚ ಪ್ರೇಮಿಯೊಬ್ಬ ಮಚ್ಚಿನಿಂದ ಪ್ರೇಯಸಿಯ ಹತ್ಯೆ ಮಾಡಿ ನಂತರ ರುಂಡದೊಂದಿಗೆ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾದ ಘಟನೆ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿ ಗ್ರಾಮದಲ್ಲಿ ನಡೆದಿದೆ.
ನಿರ್ಮಲಾ (23) ಕೊಲೆಯಾದ ಯುವತಿಯಾಗಿದ್ದು, ಭೋಜರಾಜ ಎಂಬಾತ ಕೊಲೆ ಮಾಡಿದ ವ್ಯಕ್ತಿ. ನಿರ್ಮಲಾ ಹಾಗೂ ಭೋಜರಾಜ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಯುವತಿಯ ಮನೆಯವರು ಒಪ್ಪದ ಪರಿಣಾಮ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಯುವಕ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದ ಎನ್ನಲಾಗಿದೆ.
ಯುವತಿ ಬಿಎಸ್ಸಿ ನರ್ಸಿಂಗ್ ಓದುತ್ತಿದ್ದು, ಕಳೆದ ಮೂರು ದಿನಗಳ ಹಿಂದೆಯಷ್ಟೇ ಪರೀಕ್ಷೆಗಾಗಿ ಓದಲು ಊರಿಗೆ ಆಗಮಿಸಿದ್ದಳು. ಈ ವೇಳೆ ಭೋಜರಾಜ ಏಕಾಏಕಿ ಯುವತಿಯ ಮನೆಗೆ ನುಗ್ಗಿ ಮಚ್ಚಿನಿಂದ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿದ್ದಾನೆ.
Advertisement. Scroll to continue reading.

ನಂತರ ತಲೆಯನ್ನು ಬೈಕ್ ನಲ್ಲಿ ಕಾನಾಹೊಸಹಳ್ಳಿ ಠಾಣೆಗೆ ತಂದು ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
In this article:

Click to comment