ಬೆಳಗಾವಿ : ಯುವಕನೋರ್ವ ಪ್ರೇಯಸಿಯ ಕೊಂದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವ ಕಾಲೋನಿಯಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಮದ್ಲೂರು ಗ್ರಾಮದ ರೇಣುಕಾ ಕೊಲೆಗೀಡಾದವರು. ಬೂದಿಗೊಪ್ಪ ಗ್ರಾಮದ ರಾಮಚಂದ್ರ ತೆಣಗಿ (29) ಕೊಲೆಗೈದಉ ಆತ್ಮಹತ್ಯೆ ಮಾಡಿಕೊಂಡವನು.
ಮೃತ ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ರಾಮಚಂದ್ರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಮಚಂದ್ರ ತೆಣಗಿ ರಾಜ್ಯಶಾಸ್ತ್ರದಲ್ಲಿ ಉನ್ನತ ಪದವಿ ವ್ಯಾಸಂಗ ಮಾಡುತ್ತಿದ್ದ. ಕೊಲೆಯಾದ ರೇಣುಕಾ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಗುರುವಾರ ತಡರಾತ್ರಿ ಮನೆಗೆ ಬಂದಿದ್ದ ಪ್ರಿಯಕರ ರಾಮಚಂದ್ರ ರೇಣುಕಾರನ್ನು ಸ್ಕಿಪ್ಪಿಂಗ್ ವೈರ್ನಿಂದ ಕತ್ತು ಬಿಗಿದು ಕೊಲೆ ಮಾಡಿ, ಬಳಿಕ ಅದೇ ವೈರ್ ಅನ್ನು ಫ್ಯಾನ್ಗೆ ಕಟ್ಟಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ರಾಮಚಂದ್ರ ನಿನ್ನೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ಸಂಬಂಧಿಯೊಬ್ಬರಿಗೆ ವಾಟ್ಸ್ ಆ್ಯಪ್ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ. ಪ್ರೇಯಸಿ ಮೋಸ ಮಾಡಿರುವುದೇ ಕೊಲೆಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.