ತುಮಕೂರು : ರಸ್ತೆಯ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಊರುಕೆರೆ ಬಳಿ ನಡೆದಿದೆ.
ಬೊಮ್ಮನಹಳ್ಳಿ ನಿವಾಸಿ ನವೀನ್ ಕುಮಾರ್ (34) ಮೃತ ಪಟ್ಟ ಬೈಕ್ ಸವಾರ.
ಪಂಚರ್ ಆಗಿದ್ದ ಲಾರಿಯನ್ನು ರಸ್ತೆಯ ಬಳಿ ನಿಲ್ಲಿಸಿದ್ದರು. ಈ ವೇಳೆ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ತುಮಕೂರಿನ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.