ನವದೆಹಲಿ: ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರಮಾಣ ವಚನ ಭೋದಿಸಿದರು.
ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಮಂತ್ರಿಮಂಡಲದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ಮಿಷನ್ಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು ಮತ್ತು ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ದ್ರೌಪದಿ ಮುರ್ಮು ಅವರು ರಾಜ್ ಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
Advertisement. Scroll to continue reading.

In this article:Diksoochi news, diksoochi Tv, diksoochi udupi, Droupadi Murmu, President of India
Click to comment

































