ಕಾರವಾರ : ಮಹಿಳೆಯೊಬ್ಬಳು ತಮ್ಮ ಎರಡು ವರ್ಷದ ಮಗುನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರದ ಜಲವಳ್ಳಿ ಗ್ರಾಮದಲ್ಲಿ ನಡೆದಿದೆ. ಲಲಿತಾ ಮಂಜುನಾಥ ನಾಯ್ಕ(28), ಮಾನಸಾ(2) ಮೃತಪಟ್ಟವರು.
ಕೌಟುಂಬಿಕ ಕಲಹದ ಹಿನ್ನೆಲೆಯಿಂದ ಮನೆಯ ಸಮೀಪದ ಬಾವಿಗೆ ಮಗುವೊಂದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.