ಮಂಗಳೂರು : ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದರು. 3 ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ನಾವು ಸಮರ್ಥವಾಗಿ ಎದುರಿಸುತ್ತಿದ್ದೇವೆ. ತನಿಖೆಯಿಂದ ಹಿಂದೆ ಬಿದ್ದಿಲ್ಲ. ಫಾಜಿಲ್ ಹತ್ಯೆಯನ್ನು ನಾನು ಕೇವಲ ಕೊಲೆ ಎಂದು ನೋಡುತ್ತಿಲ್ಲ. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
Advertisement. Scroll to continue reading.

In this article:cm basavaraj bommai, Diksoochi news, diksoochi Tv, diksoochi udupi, Fazil Murder, surathkal
Click to comment

































