ಕೊರಂಗ್ರಪಾಡಿ : ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ ಹಾಗೂ ಅಲೆವೂರು ಗ್ರಾಮ ಪಂಚಾಯಿತಿ ಅಭಿರಕ್ಷೆಯಲ್ಲಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕೊರಂಗ್ರಪಾಡಿ ‘ಎ’ ಉಪಕೇಂದ್ರದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪ ಅಂಚನ್, ಉಪಾಧ್ಯಕ್ಷ ಸುಧಾಕರ್ ಪೂಜಾರಿ, ಪಿಡಿಓ ದಯಾನಂದ, ಪ್ರಾಥಮಿಕ ಆರೋಗ್ಯ ಕೇಂದ್ರಮಣಿಪುರ ವೈದ್ಯಾಧಿಕಾರಿ ಡಾ. ಅಂಜಲಿ ವಾಗ್ಲೆ , ಪ್ರಭಾವತಿ ಜಾನ್ ಪ್ರೇಮ್ ಕುಮಾರ್ ವೇದಿಕೆಯಲ್ಲಿ ಉಪಸ್ಥತರಿದ್ದರು.
ಈ ಕಾರ್ಯಕ್ರಮದಲ್ಲಿ, ನಗರ ಸಭಾ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು,ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು,ಇತರ ಆರೋಗ್ಯ ಕೆಂದ್ರ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
Advertisement. Scroll to continue reading.

ಸಮುದಾಯ ಆರೋಗ್ಯ ಅಧಿಕಾರಿ ಶಿಲ್ಪಾ ಎಸ್ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಸವಿತಾ ಪ್ರಾರ್ಥನೆ ಮಾಡಿದರು.


































