ಬೆಂಗಳೂರು: ಸೋಷಿಯಲ್ ಮೀಡಿಯಾಗಳಲ್ಲಿ ಪ್ರಚೋದನಕಾರಿ ಪೋಸ್ಟ್, ಭಾಷಣದ ವೀಡಿಯೋ ಹಾಕಿದ್ರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೆಲವು ಅಂಶಗಳು ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ ಎಂದಿದ್ದಾರೆ.
ನಾವು ಪ್ರಚೋದನಕಾರಿ ಪೋಸ್ಟ್, ವೀಡಿಯೋಗಳ ಬಗ್ಗೆ ಹದ್ದಿನ ಕಣ್ಣು ನೆಟ್ಟಿದ್ದೇವೆ. ನಾವು ಅಂತಹುಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Advertisement. Scroll to continue reading.



































