Connect with us

Hi, what are you looking for?

Diksoochi News

ಸಿನಿಮಾ

ಜೀವ ಬೆದರಿಕೆ ಹಿನ್ನೆಲೆ; ಶಸ್ತ್ರಾಸ್ತ್ರ ಪರವಾನಗಿ ಪಡೆದ ಸಲ್ಮಾನ್ ಖಾನ್

1

ಮುಂಬೈ : ನಟ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಬೆದರಿಕೆ ಪತ್ರಗಳು ಬಂದ ಹಿನ್ನೆಲೆಯಲ್ಲಿ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿದ ಮುಂಬೈ ಪೊಲೀಸರು ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಿದ್ದಾರೆ.

ಮೇ 29 ರಂದು ಪಂಜಾಬ್‌ನ ಮಾನ್ಸಾ ಬಳಿ ಗಾಯಕ ಸಿಧು ಮೂಸ್ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ಅಂತರದಲ್ಲಿ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆಗೆ ಕೊಲೆ ಬೆದರಿಕೆ ಬಂದಿತ್ತು. ಹೀಗಾಗಿ ಬಂದೂಕು ಪರವಾನಗಿಗಾಗಿ ಅರ್ಜಿ ಸಲ್ಲಿಸಿದ್ದರು.

ಜೀವ ಬೆದರಿಕೆ ಹಿನ್ನೆಲೆ ಸಲ್ಮಾನ್ ಖಾನ್ ಇತ್ತೀಚೆಗೆ ಬಹಳಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಬುಲೆಟ್ ಪ್ರೂಫ್ ಕಾರನ್ನೂ ಕೂಡ ಖರೀದಿಸಿದ್ದರು. ಅದರ ಜೊತೆಗೆ ತಮ್ಮ ಬಾಡಿಗಾರ್ಡ್‌ಗಳ ಸಂಖ್ಯೆಯನ್ನೂ ಹೆಚ್ಚು ಮಾಡಿಕೊಂಡಿದ್ದರು. ಅನಗತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ, ಚಿತ್ರೀಕರಣಕ್ಕೆ ತೆರಳುವುದಾದರೂ ಬುಲೆಟ್ ಪ್ರೂಫ್ ಕಾರಲ್ಲೇ ಹೋಗುತ್ತಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!