ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.
ಅಮಿತ್ ಶಾ ದಿಢೀರ್ ಪ್ರವಾಸ ಕೈಗೊಂಡಿದ್ದು, ಆಗಸ್ಟ್ 3 ಹಾಗೂ 4ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಗಲಾಟೆ ಮಧ್ಯೆ ಅಮಿತ್ ಶಾ ಪ್ರವಾಸ ಕೈಗೊಂಡಿದ್ದಾರೆ. ಇದು ಸಹಜವಾಗಿಯೇ ತೀವ್ರ ಕುತೂಹಲ ಹುಟ್ಟಿಸಿದೆ.
Advertisement. Scroll to continue reading.
ಇನ್ನು ಮಂಗಳೂರಿನ ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ನಿವಾಸಕ್ಕೂ ಅಮಿತ್ ಶಾ ಭೇಟಿ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.