ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕಾಲ್ನಡಿಗೆ ಜಾಥಾ ಬ್ರಹ್ಮಾವರದಲ್ಲಿ ಭಾನುವಾರ ನಡೆಯಿತು.
ಬ್ರಹ್ಮಾವರ ಬಸ್ಸು ನಿಲ್ದಾಣದ ಬಳಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಜಾಥಾಕ್ಕೆ ಚಾಲನೆ ನೀಡಿದರು.

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಮೇಶ್ ಕಾಚನ್ , ಕಾಂಗ್ರೆಸ್ ಪ್ರಮುಖರಾದ ಬಿ.ಭುಜಂಗ ಶೆಟ್ಟಿ, ಅಶೋಕ್ ಕುಮಾರ್ ಕೊಡವೂರು , ಪ್ರಖ್ಯಾತ್ ಶೆಟ್ಟಿ, ರಾಘವೇಂದ್ರ ಶೆಟ್ಟಿ ಕರ್ಜೆ ,ಕಿಶನ್ ಹೆಗ್ಡೆ ಕೊಳ್ಕೆಬೈಲ್ , ರಾಜೇಶ್ ಶೆಟ್ಟಿ ಕುಮ್ರಗೋಡು, ಗುರು, ಎಂ.ಎ.ಗಫೂರ್, ತಾಜುದ್ದೀನ್ , ಅಲ್ತಾಫ್ , ಮಲ್ಲಿಕಾ ಬಾಲಕೃಷ್ಣ ಪೂಜಾರಿ , ವೆರೋನಿಕಾ ಕರ್ನೆಲಿಯೋ, ಡಾ.ಸುನೀತ ಶೆಟ್ಟಿ, ರೋಶನಿ ಒಲಿವೆರಾ ಉಪಸ್ಥಿತರಿದ್ದರು.

ಬ್ರಹ್ಮಾವರ ಬಸ್ ನಿಲ್ದಾಣದಿಂದ ಹೊರಟ ಜಾಥಾ ಬ್ರಹ್ಮಾವರ ರಥಬೀದಿ ಮೂಲಕ ಹಂದಾಡಿ, ಕುಮ್ರಗೋಡು, ರಾಷ್ಟ್ರೀಯ ಹೆದ್ದಾರಿ ೬೬ ಮೂಲಕ ಉಪ್ಪಿನಕೋಟೆ, ಸಾಲಿಕೇರಿಯಲ್ಲಿ ಸಮಾಪನಗೊಂಡಿತು.
ನೂರಾರು ಕಾಂಗ್ರೇಸ್ ಕಾರ್ಯಕರ್ತರು ಜಾಥಾದಲ್ಲಿ ಭಾಗವಹಿಸಿ, ವಂದೇ ಮಾತರಂ , ರಘುಪತಿ ರಾಘವ ರಾಜಾರಾಮ್, ಭಾರತ್ ಮಾತಾಕೀ ಜೈ ಘೋಷಣೆಗಳು ಸೇರಿದಂತೆ ಅನೇಕ ದೇಶಭಕ್ತಿ ಗೀತೆಗಳು ಮೊಳಗಿತ್ತು.


