ಬೆಂಗಳೂರು : ಕನ್ನಡದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತರು, ಖ್ಯಾತ ಗಾಯಕರಾದಂತ ಶಿವಮೊಗ್ಗ ಸುಬ್ಬಣ್ಣ ಅವರು ದಿನಾಂಕ 11-08-2022ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ತಿಳಿಸಿದ್ದಾರೆ.
ಇನ್ನೂ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ಕನಿಷ್ಠ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ, ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸುವಂತೆ ಆದೇಶಿಸಿದ್ದಾರೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Police Honours, Singer Shivamogga Subbanna

Click to comment