ಚಿತ್ತೂರು : ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಬೆಂಗಳೂರು ಮೂಲದ ತಾಯಿ ಮತ್ತು ಆಕೆಯ ಮೂರು ವರ್ಷದ ಮಗ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದಲ್ಲಿ ಚಿತ್ತೂರಿನಲ್ಲಿ ನಡೆದಿದೆ.
ಗಂಗಾವರಂ ಸಮೀಪ ಈ ದುರ್ಘಟನೆ ಸಂಭವಿಸಿದ್ದು ಗಾಯತ್ರಿ (30) ಮತ್ತು ಮಗ ವಿಥುನ್ (3) ಮೃತಪಟ್ಟವರು.
ಕಾರಿನಲ್ಲಿದ್ದ ತಂದೆ ಮತ್ತು ಮಗಳು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement. Scroll to continue reading.

ವೆಲ್ಲೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಕಾರು ಟೈರ್ ಪಂಕ್ಚರ್ ಆಗಿ ನಿಯಂತ್ರಣ ತಪ್ಪಿ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಾಯಾಳು ತಂದೆ ಮತ್ತು ಮಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
Advertisement. Scroll to continue reading.

In this article:Andrapradesh, chittur, Diksoochi news, diksoochi Tv, diksoochiudupi
Click to comment

































