ಉತ್ತರ ಪ್ರದೇಶ: ಟ್ರಕ್ ಒಂದು ಮನೆಗೆ ನುಗ್ಗಿದ ಪರಿಣಾಮ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಮೈನ್‌ಪುರಿ ಜಿಲ್ಲೆಯಲ್ಲಿನಡೆದಿದೆ. ಒಬ್ಬ ವ್ಯಕ್ತಿ ಇನ್ನೂ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಜಿಟಿ ರಸ್ತೆಯಲ್ಲಿರುವ ಖಿರಿಯಾ ಪೀಪಲ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ನಡೆದಿದೆ.
ಈ ದುರ್ಘಟನೆಯಲ್ಲಿ ನಿವೃತ್ತ ಸಬ್‌ಇನ್‌ಸ್ಪೆಕ್ಟರ್ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದಾರೆ. ಟ್ರಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಒಬ್ಬರು ಇನ್ನೂ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Advertisement. Scroll to continue reading.

ಕುರವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.