ವರದಿ: ದಿನೇಶ್ ರಾಯಪ್ಪನಮಠ
ಕುಂದಾಪುರ : ಪತ್ನಿಯನ್ನು ಕೊಂದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ದೇವಲ್ಕುಂದ ಶಾಲೆ ಸಮೀಪದಲ್ಲಿ ರವಿವಾರ ತಡರಾತ್ರಿ ನಡೆದಿದೆ. ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.


ಮೂಲತಃ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರನ್ನು ವಿವಾಹವಾಗಿದ್ದರು. ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದರು.

ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರೊಂದಿಗೆ ಪತಿ ಹಾಗೂ ಪತ್ನಿ ಮೊದಲು ಇಲ್ಲಿಯೇ ನೆಲೆಸಿದ್ದರು ಎನ್ನಲಾಗಿದೆ. ಅತಿಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ಬಳಿಕ ಪತ್ನಿಗೂ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತ್ನಿ ಪೂರ್ಣಿಮಾ ಪತಿಯಿಂದ ದೂರ ಉಳಿದುಕೊಂಡಿದ್ದರು. ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ವಾಸವಾಗಿದ್ದರು. ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಪುರ್ಣಿಮಾ ಬಂದಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



































