ಶಿವಮೊಗ್ಗ: ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯಮಟ್ಟದ ಶಾಲಾ ಕ್ರೀಡಾಕೂಟ ನಡೆಯುತ್ತಿತ್ತು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ಎರಡು ಕೋಮುಗಳ ನಡುವೆ ಗಲಾಟೆ ಉಂಟಾಗಿದೆ. ಪರಿಣಾಮ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಏಕಾಏಕಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಿಸಿದ್ದಾರೆ.
ಗಲಾಟೆ ಅಂತ್ಯಗೊಂಡು ಎಲ್ಲರೂ ಹೋಗುವ ವೇಳೆ ಮತ್ತೆ ಎರಡು ಕೋಮಿನ ಗುಂಪುಗಳ ನಡುವೆ ಶಿರಾಳಕೊಪ್ಪ ಬಸ್ ನಿಲ್ದಾಣದ ಬಳಿ ಮಾರಾಮಾರಿಯಾಗಿದೆ ಎನ್ನಲಾಗಿದೆ.
Advertisement. Scroll to continue reading.

ಈ ವೇಳೆ ಗಾಯಗೊಂಡ ಗಾಯಾಳುಗಳನ್ನು ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿರಾಳಕೊಪ್ಪ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Shikaripura, shiralakoppa

Click to comment