Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ ಸುಣ್ಣಾರಿ ಎಕ್ಸಲೆಂಟ್ ಸ್ಕೂಲ್ ಮತ್ತು ಕಾಲೇಜು: ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ, ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಮೂರು ಪದಕ

1

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಸ್ಕೂಲ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮಟ್ಟ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಸಾಧನೆಗೈಯುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಚಾಪನ್ನು ಮೂಡಿಸುತ್ತಿದ್ದಾರೆ.


ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳಾದ ಮಾನಸ ಪ್ರಥಮ ಸ್ಥಾನಿಯಾಗಿ ಹಾಗೂ ನಿಹಾಲ್ ಎನ್ ಶೆಟ್ಟಿ ತೃತೀಯ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಉಡುಪಿ ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿರುವ ಏಕೈಕ ಕಾಲೇಜು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Advertisement. Scroll to continue reading.


ಉಡುಪಿ ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆ ಆಯೋಜಿಸಿದ ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪ್ರೌಢ ಶಾಲಾ ವಿದ್ಯಾರ್ಥಿಗಳಾದ ತತ್ವ ಶೆಟ್ಟಿ ಮತ್ತು ಪ್ರಕೃತಿ ಪಿ ಶೆಟ್ಟಿ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದರ ಮೂಲಕ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.


ಶಿವಮೊಗ್ಗದಲ್ಲಿ ನಡೆದ ಓಪನ್ ೩ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಘ್ನೇಶ್ ನಾಯಕ ಕುಮಟೆ ವಿಭಾಗದಲ್ಲಿ ಚಿನ್ನದ ಪದಕ, ಕಟಾ ವಿಭಾಗದಲ್ಲಿ ಚಿನ್ನದ ಪದಕ, ಮೊಹಮ್ಮದ್ ಅನೀಸ್ ಕುಮಟೆ ವಿಭಾಗದಲ್ಲಿ ಬೆಳ್ಳಿ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದರೆ, ಆಯುಷ್ ಪುತ್ರನ್ ಇವರು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಕುಮಟೆ ವಿಭಾಗದಲ್ಲಿ ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.


ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆಯನ್ನು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಹಾಗೂ ಕೋಶಾಧಿಕಾರಿ ಭರತ್ ಶೆಟ್ಟಿಯವರು ಅಭಿನಂದಿಸುತ್ತಾ ವಿದ್ಯಾರ್ಥಿಗಳಿಗೆ ಪೂರಕವಾದ ತರಬೇತಿಯನ್ನು ನಮ್ಮ ಸಂಸ್ಥೆಯು ಒದಗಿಸುತ್ತಿದ್ದು ವಿದ್ಯಾರ್ಥಿಗಳ ಸಾಧನೆಗೆ ಬೆನ್ನಲುಬಾಗಿ ನಿಲ್ಲುವ ಕೆಲಸ ಮಾಡುತ್ತಿದ್ದೇವೆ.

ಈ ಭಾಗದ ವಿದ್ಯಾರ್ಥಿಗಳನ್ನು ಕ್ರೀಡಾ ಕ್ಷೇತ್ರದಲ್ಲಿ ಹುರಿದುಂಬಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಪಿಯುಸಿ ವಿಭಾಗದ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸುತ್ತಿದ್ದೇವೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.


ನಮ್ಮ ಸಂಸ್ಥೆ ಶಿಕ್ಷಣ, ಕಲ್ಚರಲ್ ಮತ್ತು ಸ್ಟೋಟ್ಸ್ನಲ್ಲಿ ಟ್ಯಾಲೆಂಟ್ ಇದ್ದ ವಿದ್ಯಾರ್ಥಿಗಳಿಗೆ ಫ್ರೀ ಎಜುಕೇಶನ್ ಫೇಸಿಲಿಟಿಯನ್ನು ಈ ಭಾಗದ ವಿದ್ಯಾರ್ಥಿಗಳಿಗೆ ಸಹಕಾರಿಯಾಗುವ ರೀತಿಯಲ್ಲಿ ಸಮಾಜಮುಖಿಯಾಗಿ ಸಮಾಜದೊಂದಿಗೆ ಕೆಲಸ ಮಾಡುತ್ತಿದ್ದೇವೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!