ವರದಿ: ದಿನೇಶ್ ರಾಯಪ್ಪನಮಠ
ಕುಂದಾಪುರ : ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿ ನಡೆಸಿ ಭೂಮಾಲಕರ ಮೇಲೆ ಅಮಿಷವೊಡ್ಡಿ ಪಟ್ಟಭದ್ರ ಹಿತಾಸಕ್ತಿಗಳು ತಾಲೂಕು ಕಛೇರಿಯಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಹಾಗೂ ಕೆಲವೊಂದು ವ್ಯಕ್ತಿಗಳು ಕಾನೂನನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿರುವ ಬಗ್ಗೆ ಆರೋಪ ಮಾಡಿದ್ದಾರೆ.ತಹಶೀಲ್ದಾರ್ ಕಚೇರಿಯಲ್ಲಿ ತಿದ್ದುವ ಕೆಲಸವಾಗುತ್ತಿದ್ದಲ್ಲಿ ಶಾಸಕರು ಏನು ಮಾಡುತ್ತಿದ್ದಾರೆ? ಕ್ಷೇತ್ರದ ಯಾವುದೇ ಅಧಿಕಾರಿಗಳು ಶಾಸಕರ ಹಿಡಿತದಿಲ್ಲವೇ? ತಮ್ಮದೇ ಸರ್ಕಾರ, ತಮ್ಮದೇ ಶಾಸಕರು ಇದ್ದೂ ಸಹ ಮಂಡಲ ಅಧ್ಯಕ್ಷರು ತಮ್ಮದೇ ಸರ್ಕಾರದ ವಿರುದ್ಧ ಇಂತಹ ಆಪಾದನೆ ಮಾಡುತ್ತಿರುವುದು ನಾಚಿಕೇಡಿನ ಸಂಗತಿ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದ್ದಾರೆ.
ಶಾಸಕರ ಮೇಲೆ ನಂಬಿಕೆಯಿಲ್ಲ. ಪಕ್ಷದ ಒಳಗೆ ಯಾವುದೇ ಹಿಡಿತವಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ಇಂತಹ ಕೆಲಸವಾಗುತ್ತಿದ್ದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಅಮಾನತುಗೊಳಿಸಬೇಕು ಮತ್ತು ಜಿಲ್ಲಾಧಿಕಾರಿಗಳ ಮೂಲಕ ತನಿಖೆ ನಡೆಯಬೇಕಿದೆ. ತಪ್ಪಿತಸ್ಥರನ್ನು ಮನೆಗೆ ಕಳುಹಿಸುವ ಕೆಲಸ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ರೀತಿ ಮುಂದುವರೆದಲ್ಲಿ ತಹಶೀಲ್ದಾರ್ ಕಚೇರಿ ಎದುರು ಬ್ಲಾಕ್ ಕಾಂಗ್ರೆಸ್ ಮೂಲಕ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದುಎಂದು ಅವರು ಎಚ್ಚರಿಕೆ ನೀಡಿದ್ದಾರೆ.


































