ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಲಿಂಗಾಯತ ಮಠಾಧೀಶ ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಕರ್ನಾಟಕ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು.
ಪೋಕ್ಸೊ ಕಾಯ್ದೆಯ ಸೆಕ್ಷನ್ಸ್ಗಳ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಮಠದಿಂದ ನಡೆಸಲ್ಪಡುವ ಶಾಲೆಯಲ್ಲಿ ಕಲಿಯುತ್ತಿರುವ 15 ಮತ್ತು 16 ವರ್ಷದ ಇಬ್ಬರು ಬಾಲಕಿಯರು ಮೂರೂವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ 6 ದಿನಗಳ ನಂತರ ಬಂಧಿಸಲಾಗಿದೆ.

Advertisement. Scroll to continue reading.



































