ಬೀದರ್: ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ.
ಸಂಧ್ಯಾರಾಣಿ ಸಂಜುಕುಮಾರ ಕಾಂಬಳೆ ಮೃತ ಬಾಲಕಿ. ಎರಡನೇ ತರಗತಿಯಲ್ಲಿ ಓದುತ್ತಿದ್ದ ಸಂಧ್ಯಾರಾಣಿ ಗುರುವಾರ ಈದ್ ಮಿಲಾದ್ ರಜೆ ಕಾರಣ ಮನೆಯಲ್ಲಿದ್ದಳು. ಬಾಲಕಿ ಆಟ ಆಡುವಾಗ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಆಕೆಯ ತಲೆಗೆ ತೀವ್ರವಾಗಿ ಗಾಯವಾಗಿದೆ ಎಂದು ಹೇಳಲಾಗಿದೆ.
ಗಾಯಾಳು ಸಂಧ್ಯಾರಾಣಿಯನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆಕೆ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement. Scroll to continue reading.

ಸ್ಥಳಕ್ಕೆ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.